ದೈಹಿಕ, ಮಾನಸಿಕ ಮತ್ತು ಸಾಮಾಜಿಕ ನೆಮ್ಮದಿಯ ಸ್ಥಿತಿಯೇ ಆರೋಗ್ಯ. ಆರೋಗ್ಯಕ್ಕೆ ಏನು ಬೇಕು?
• ಪೌಷ್ಠಿಕ ಆಹಾರ (ಧಾನ್ಯ, ಹಣ್ಣು, ತರಕಾರಿ, ಹಾಲು,ಮೊಟ್ಟೆ,ಮೀನು, ಮಾಂಸ ಇತ್ಯಾದಿ ಸಮತೋಲನ ಆಹಾರ)
• ಶುದ್ಧ ಕುಡಿಯುವ ನೀರು, ಉತ್ತಮ ಪರಿಸರ
• ಮನೆಯ ಮತ್ತು ಸುತ್ತಮುತ್ತ ಶುದ್ಧಗಾಳಿ, ಸಾಕಷ್ಟು ಬೆಳಕು, ಸ್ವಚÀ್ಛತೆ
• ಸಾಮಾಜಿಕ ಪರಿಸರ ಎಂದರೆ ಜಾತಿ, ಧರ್ಮ, ಲಿಂಗ ಸಮಾನತೆ ಇರುವ ಸಮಾಜ
• ವೈಯಕ್ತಿಕ ಸ್ವಚ್ಛತೆ
• ಸಾಂಸ್ಕøತಿಕ ನೆಮ್ಮದಿ ಮತ್ತು ಮನರಂಜನೆ
• ದುಶ್ಚಟಗಳಿಂದ ದೂರವಿರುವುದು
ಹಾಗಿರುವಾಗ
ಆರೋಗ್ಯ ಕಾಪಾಡಲು ವೈದ್ಯರು ಬೇಕೆ? ನೀವೇ ಸಾಕೆ?
ಆರೋಗ್ಯಕ್ಕೆ ವೈದ್ಯರು ಬೇಡ, ಅನಾರೋಗ್ಯಕ್ಕೆ ಮಾತ್ರ ವೈದ್ಯರು ಬೇಕು!!!
ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶಗಳು ಯಾವುವು?
• ಸಾಮಾಜಿಕ ಕಾರಣಗಳು:(ಲಿಂಗಭೇದ,ಜಾತಿಭೇದ ಇತ್ಯಾದಿ) ಉದಾಹರಣೆಗೆ ಮಹಿಳೆಯರು ಮತ್ತು ಪುರುಷರ ಊಟದಲ್ಲಿ ವ್ಯತ್ಯಾಸ, ಜಾತಿಯ ಕಾರಣದಿಂದ ಮೂಲ ಸೌಕರ್ಯಗಳನ್ನು ವಂಚಿಸುವುದು, ಇತ್ಯಾದಿ.
• ಆರ್ಥಿಕ ಕಾರಣಗಳು:ಬಡತನ, ನಿರುದ್ಯೋಗ, ಕಡಿಮೆ ಕೂಲಿ, ಇತ್ಯಾದಿ ಕಾರಣಗಳು
ಉದಾಹರಣೆಗೆ- ಬಡತನದಿಂದಾಗಿ ಸರಿಯಾದ ಆಹಾರ ಸಿಗದಿರುವುದು, ಇದರಿಂದಾಗಿ ರಕ್ತಹೀನತೆ ಮುಂತಾದ ತೊಂದರೆಗಳು ಉಂಟಾಗುವುದು, ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಲು ಸಾಧ್ಯ ವಾಗದಿರುವುದು
• ರಾಜಕೀಯ ಕಾರಣಗಳು: ಉದಾಹರಣೆಗೆ-ಆರೋಗ್ಯಕ್ಕೆ ನೀಡಲಾಗುವ ಹಣಕಾಸಿನ ಹಂಚಿಕೆ ಸರಿಯಾಗಿ ಆಗದೆ ಇರುವುದು. ಮೂಲಭೂತ ಸೌಕರ್ಯಗಳನ್ನು ಸಕಾಲಕ್ಕೆ ಒದಗಿಸದೆ ಇರುವುದು, ಸರಕಾರಿ ನೀತಿ
(ಕೈಗಾರಿಕ ಹಾಗೂ ಕೃಷಿಗೆ ನೀಡುವ ಅನುದಾನ ಮತ್ತು ರಿಯಾಯಿತಿಗಳಲ್ಲಿ ವ್ಯತ್ಯಾಸವಿರುವುದು, ಮತ್ತದರಿಂದ ಕೆಲಸಗಾರರು ಪಡೆಯುವ ಸಂಭಾವನೆಯಲ್ಲಿ ವ್ಯತ್ಯಯ)
• ಶೈಕ್ಷಣಿಕ ಕಾರಣಗಳು:ಅನಕ್ಷರತೆ,ಮೂಢನಂಬಿಕೆಗಳು ಆರೋಗ್ಯದ ಬಗ್ಗೆ ಅರಿವಿಲ್ಲದಿರುವುದು.ಯಂತ್ರ ಮಂತ್ರ ಇತ್ಯಾದಿಗಳ ಮೊರೆ ಹೋಗುವುದು. ಇವೆಲ್ಲಾ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ.
ಕೊನೆಯ ಮಾರ್ಪಾಟು : 2/24/2020