ಮಡಿಲು ಕಾರ್ಯಕ್ರಮದ ಉದ್ದೇಶವೇನು?
ಉತ್ತರ : ಬಡತನ ರೇಖೆಗಿಂತ ಕಡಿಮೆ ಆದಾಯ ಇರುವ ಗರ್ಭಿಣಿ ಸ್ತ್ರೀಯರು ಸುರಕ್ಷಿತ ಹೆರಿಗೆಗಾಗಿ ಸರ್ಕಾರಿ ಆಸ್ಪತ್ರೆ ಬರಲು ಹಾಗೂ ಇದರಿಂದ ತಾಯಿ ಮತ್ತು ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶದಿಂದ ಮಡಿಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಪ್ರದೇಶದ ಎಲ್ಲಾ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮ ಮಡಿಲು ತುಂಬುವುದನ್ನು ಹಮ್ಮಿಕೊಳ್ಳಲಾಗುವುದು. ಈ ಸಂದರ್ಭಗಳಲ್ಲಿ ಗರ್ಭಿಣಿ ಸ್ತ್ರೀಗೆ ಗಂಡಾಂತರ ಹೆರಿಗೆಗಳಲ್ಲಿ ಉಂಟಾಗಬಹುದಾದ ತೊಂದರೆಗಳ ಬಗ್ಗೆ ಹಾಗೂ ಗ್ರಾಮೀಣ ಸ್ತ್ರೀಯರು ಪಡೆಯಬೇಕಾದ ಪ್ರತಿಬಂಧಕ ಲಸಿಕೆಗಳ ಬಗ್ಗೆ ಶುಚಿತ್ವದ ಬಗ್ಗೆ ಅರಿವು ಮೂಡಿಸಲಾಗುವುದು.
ಫಲಾನುಭವಿಗಳು
1. ಬಡತನ ರೇಖೆಗಿಂತ ಕೆಳಗಿರುವವರು
2. ಸರ್ಕಾರಿ ಸಂಸ್ಥೆಗಳಲ್ಲಿ ಹೆರಿಗೆ ಮಾಡಿಸಿಕೊಂಡವರು
3. ಎರಡು ಮಕ್ಕಳಿಗೆ ಮಾತ್ರ ಸೀಮಿತವಾಗಿರುವವರು
ಸೌಲಭ್ಯ
ಸುರಕ್ಷಿತ ಬಾಣಂತನಕ್ಕೆ ಹೆರಿಗೆ ನಂತರ 3 ತಿಂಗಳವರೆಗೆ ತಾಯಿ ಮಗುವಿಗೆ ಅಗತ್ಯವಿರುವ 19 ಸಾಮಗ್ರಿಗಳಿರುವ ಒಂದು ವೈದ್ಯಕೀಯ ಕಿಟ್‍ನ್ನು ‘ತವರಿನ ಉಡುಗೊರೆ’ ಎಂದು ತಾಯಿಗೆ ನೀಡಲಾಗುವುದು.
ಸೂಚನೆ :
• ಖಾಸಗಿ ಆಸ್ಪತ್ರೆಗಳಲ್ಲಿ ಹೆರಿಗೆಯಾದವರಿಗೆ ಈ ಸೌಲಭ್ಯ ಸಿಗುವುದಿಲ್ಲ.
• ಉಪಕೇಂದ್ರ ಮತ್ತು ಆರೋಗ್ಯ ಕೇಂದ್ರದಲ್ಲಿ ಗರ್ಭಿಣಿ ಸ್ತ್ರೀಯರು ಸಾಧ್ಯವಾದಷ್ಟು ಮುಂಚಿತವಾಗಿ ನೊಂದಾಯಿಸಿಕೊಳ್ಳಬೇಕು.
• ಬಡತನ ರೇಖೆಗಿಂತ ಕೆಳಗಿದ್ದು ಬಿ.ಪಿ.ಎಲ್. ಕಾರ್ಡ್ ಹೊಂದಿಲ್ಲದವರು ಕಂದಾಯ ಅಧಿಕಾರಿಗಳಿಂದ ಸಮಾನಾಂತರವಾದ ದೃಢೀಕರಣ ಪತ್ರವನ್ನು ಪಡೆದುಕೊಂಡು ಈ ಸೌಲಭ್ಯ ಪಡೆಯಬಹುದು.
ಕೊನೆಯ ಮಾರ್ಪಾಟು : 5/27/2020