অসমীয়া   বাংলা   बोड़ो   डोगरी   ગુજરાતી   ಕನ್ನಡ   كأشُر   कोंकणी   संथाली   মনিপুরি   नेपाली   ଓରିୟା   ਪੰਜਾਬੀ   संस्कृत   தமிழ்  తెలుగు   ردو

ಮಾನಿಟರಿಂಗ್ ಸಮಿತಿ

ವ್ಯಾಪ್ತಿ:

ಪ್ರಾಥಮಿಕ ಆರೋಗ್ಯ ಕೇಂದ್ರದ ಭೌಗೋಳಿಕ ಪ್ರದೇಶಕ್ಕೆ ಸೀಮಿತವಾಗಿರುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ರೋಗ ನಿಯಂತ್ರಣ, ತಾಯಿ ಮಕ್ಕಳ ಆರೋಗ್ಯ, ಸಮಗ್ರ ತಾಯಿ ಭಾಗ್ಯ ಮುಂತಾದ ಸೇವೆಗಳ/ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ದೊರೆಯುವ ಗುಣಮಟ್ಟದ ಸಾಂಸ್ಥಿಕ ವೈದ್ಯಕೀಯ ಸೇವೆಗಳ ನಿರ್ವಹಣೆ ಕುರಿತಂತೆ ಘಟಿಸಲಾಗಿರುವ “ಆರೋಗ್ಯ ರಕ್ಷಾ ಉಪ ಸಮಿತಿ”

ಯನ್ನೊಳಗೊಂಡಂತೆ ಒಂದು ಆರೋಗ್ಯ ಯೋಜನಾ ಮತ್ತು ಮಾನಿಟರಿಂಗ್ ಸಮಿತಿ ರಚಿಸತಕ್ಕದ್ದು.

ರಚನೆ

ರಚಿಸಲಾಗುವ ಪ್ರಾಥಮಿಕ  ಆರೋಗ್ಯ ಕೇಂದ್ರ ಆರೋಗ್ಯ ಮತ್ತು ಮಾನಿಟರಿಂಗ್ ಸಮಿತಿಯು ಸದಸ್ಯರನ್ನು ಹೊಂದಿರತಕ್ಕದ್ದು.

ಮಾನಿಟರಿಂಗ್ ಸಮಿತಿಯ ಜವಾಬ್ದಾರಿಗಳು:

ಭಾರತ ಸರ್ಕಾರದ ಮಾರ್ಗಸೂಚಿಯನ್ವಯ ಸಮುದಾಯ ಮಾನಿಟರಿಂಗ್ ಕಾರ್ಯಗಳನ್ನು ಅರ್ಥಪೂರ್ಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸುವುದು.

 

. 6 ತಿಂಗಳಿಗೊಂದು ಬಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಜನಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳತಕ್ಕದ್ದು. ಮತ್ತು ಇದರಲ್ಲಿ ಆರೋಗ್ಯ ಇಲಾಖೆಯ ವಿವಿಧ ಆರೋಗ್ಯ ಮತ್ತು ವೈದ್ಯಕೀಯ  ಸೇವೆಗಳು ಮತ್ತು ಕೊರತೆಗಳ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯಪಡೆದು, ಸೇವೆಗಳನ್ನು ಉತ್ತಮಪಡಿಸುವಲ್ಲಿ ಸ್ಥಳೀಯವಾಗಿ ಕಾರ್ಯೋನ್ಮುಖರಾಗುವುದು.

 

ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿಬರುವ ಎಲ್ಲಾ ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿಯ ಯೋಜನೆಗಳನ್ನು ಕ್ರೋಢೀಕರಿಸಿ, ಪರಾಮರ್ಶಿಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಾರ್ಷಿಕ ಆರೋಗ್ಯ ಯೋಜನೆ ತಯಾರಿಸುವುದು.

 

ಆ.3.4. ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸವಲತ್ತುಗಳು, ಸೇವಾ ವಿವರಗಳು ಮತ್ತು ಸೇವಾ ವೇಳಾಪಟ್ಟಿ ಹಾಗೂ ಉಚಿತ ಸೇವೆಗಳ ಬಗ್ಗೆ ಮಾಹಿತಿ ನೀಡುವ  ನಾಗರಿಕ ಸನ್ನದುಗಳ ಫಲಕ ಹಾಕಿಸುವುದು. ನಾಗರಿಕರಿಗೆ ಆರೋಗ್ಯ ಸೇವೆ ಉತ್ತಮಪಡಿಸಲು ಅನುಕೂಲವಾಗುವಂತೆ ಸಲಹಾ ಪೆಟ್ಟಿಗೆ ಇರಿಸುವುದು.

 

ಆರೋಗ್ಯ ಕೇಂದ್ರದಲ್ಲಿ ಮೂಲಭೂತ ಸೌಕರ್ಯ, ಯಂತ್ರೋಪಕರಣ,ಔಷಧಿ, ನೀರಿನ ಸಂಪರ್ಕ ಇತ್ಯಾದಿಗಳನ್ನು ಸಂಬಂಧಪಟ್ಟ ಇಲಾಖೆಗಳನ್ನು ಸಂಪರ್ಕಿಸಿ ಉತ್ತಮಗೊಳಿಸುವುದು.

 

ಸ್ಥಳೀಯ ಸಮುದಾಯ ಸಂಸ್ಥೆಗಳು ಹಾಗೂ ಸ್ವಯಂ ಸೇವಾಸಂಸ್ಥೆಗಳೊಂದಿಗೆ ಸಮನ್ವಯಿಸಿ ಆರೋಗ್ಯ ಪರಿಸ್ಥಿತಿಯನ್ನು ಸುಧಾರಿಸುವುದು.

 

ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಉಪಕೇಂದ್ರಗಳು ಉತ್ತಮ ಸೇವೆ ಕೊಡಲು ಅಗತ್ಯವಾದ ನಿರ್ಧಾರಗಳನ್ನು ಮಾಡಿ ಅದರಂತೆ ಕ್ರಮ ಕೈಗೊಳ್ಳುವುದು.

 

ಸರ್ಕಾರಿ ಆರೋಗ್ಯ/ ವೈದ್ಯಕೀಯ ಸೌಲಭ್ಯಗಳ ಗುಣಮಟ್ಟದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮತ್ತು ಸೇವಾಬಳಕೆ ಹೆಚ್ಚಾಗುವಂತೆ ಅಗತ್ಯ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳುವುದು.

 

ಆರೋಗ್ಯ/ ವೈದ್ಯಕೀಯ ಸೇವೆ ನಿರಾಕರಣೆ ಸಂದರ್ಭದಲ್ಲಿ ಸೂಕ್ತ ಪರಿಹಾರ ಕ್ರಮ ಕೈಗೊಂಡು ಸೇವ ವ್ಯವಸ್ಥೆಯನ್ನು  ಉತ್ತಮಪಡಿಸುವುದು.

 

ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ/ಗ್ರಾಮ ಆರೋಗ್ಯ ಯೋಜನಾ ಮತ್ತು ಮಾನಿಟರಿಂಗ್ ಸಮಿತಿಯ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸುವುದು.

 

.ಪ್ರಾ.ಆ. ಕೇಂದ್ರ ವ್ಯಾಪ್ತಿಯಲ್ಲಿ ವರದಿಯಾಗುವ ಪ್ರತಿಯೊಂದು ತಾಯಿ ಮತ್ತು ಶಿಶು ಮರಣವನ್ನು ದಾಖಲಿಸುವುದು ಹಾಗೂ ಇದಕ್ಕೆ ಕಾರಣವಾದ ಸೌಲಭ್ಯಗಳ ಕೊರತೆಯ ಬಗ್ಗೆ ಪರಿಶೀಲಿಸಿ, ಅಗತ್ಯ ನಿವಾರಣಾ ಕ್ರಮಗಳನ್ನು ಕೈಗೊಂಡು ಇನ್ನು ಮುಂದೆ ತಾಯಿ ಮತ್ತು ಶಿಶು ಮರಣ ಸಂಭವಿಸಿದಂತೆ  ತಡೆಗಟ್ಟುವುದು.

 

ಹೆಣ್ಣು ಭ್ರೂಣಹತ್ಯೆಗೆ ಕಾರಣವಾಗುವ ಸಾಮಾಜಿಕ ಆಯಾಮಗಳ ಬಗ್ಗೆ ಜನಜಾಗೃತಿ ಅಭಿಯಾನವನ್ನು  ಎಲ್ಲಾ ಗ್ರಾಮಗಳಲ್ಲೂ ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿಯ ಸಹಯೋಗದೊಂದಿಗೆ  ಹಮ್ಮಿಕೊಳ್ಳುವುದು ಹಾಗೂ ಇಂತಹ ಪ್ರಕರಣಗಳ ನಿಖರ ಮಾಹಿತಿಯನ್ನು ಜಿಲ್ಲಾ ಸಕ್ಷಮ ಪ್ರಾಧಿಕಾರ/ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಗಮನಕ್ಕೆ ತರತಕ್ಕದು ಮತ್ತು ನಿರ್ದಿಷ್ಠ ಕ್ರಮಕ್ಕಾಗಿ ಒತ್ತಾಯಿಸುವುದು.

 

ವಿವಿಧ ಜನಪರ ಕಾರ್ಯಕ್ರಮಗಳಾದ ಪ್ರಸೂತಿ ಆರೈಕೆ, ಜನನಿ ಸುರಕ್ಷಾ ಯೋಜನೆ, ಮಡಿಲು ಮತ್ತು ತಾಯಿ ಭಾಗ್ಯದ ಸವಲತ್ತುಗಲನ್ನು ಪಡೆದು ಫಲಾನುಭವಿಗಳ ಸತ್ಯಾಪನೆ ಮಾಡುವುದು

ಕೊನೆಯ ಮಾರ್ಪಾಟು : 7/13/2020



© C–DAC.All content appearing on the vikaspedia portal is through collaborative effort of vikaspedia and its partners.We encourage you to use and share the content in a respectful and fair manner. Please leave all source links intact and adhere to applicable copyright and intellectual property guidelines and laws.
English to Hindi Transliterate