1. ತಾಯಿ ಮತ್ತು ಮಗುವಿನ ಮರಣದ ಪ್ರಮಾಣವನ್ನು ಇಳಿಸುವುದು.
2. ಸಾಂಕ್ರಾಮಿಕ ರೋಗಗಳನ್ನು ಅಂದರೆ, ಕ್ಷಯ, ಮಲೇರಿಯಾ, ಡೆಂಗ್ಯು ಮುಂತಾದ ಖಾಯಿಲೆಗಳನ್ನು ನಿಯಂತ್ರಣ ಮಾಡುವುದು.
3. ಸ್ಥಳೀಯವಾಗಿ ಉದ್ಭವಿಸಬಹುದಾದ ರೋಗಗಳನ್ನು ನಿಯಂತ್ರಿಸುವುದು.
4. ಗುಣಾತ್ಮಕ ಆರೋಗ್ಯ ಸೇವೆಗಳು ಎಲ್ಲರಿಗೂ ಸಿಗುವಂತೆ ಸೌಲಭ್ಯಗಳನ್ನು ಹೆಚ್ಚು ಮಾಡುವುದು.
5. 1000 ಜನಸಂಖ್ಯೆಗೆ ಒಬ್ಬರಂತೆ ಗ್ರಾಮಮಟ್ಟದಲ್ಲಿ “ಆಶಾ” ಆರೋಗ್ಯ ಕಾರ್ಯಕರ್ತೆಯರನ್ನು ಆಯ್ಕೆಮಾಡಿ, ಅವರೊಂದಿಗೆ ಅಗತ್ಯವಾಗಿ ಸಾಮಾನ್ಯವಾಗಿರುವ ಔಷಧಗಳ ಕಿಟ್ ಇರುವಂತೆ ಮಾಡುವುದು.
6. ಎಲ್ಲಾ ಆಸ್ಪತ್ರೆಗಳಿಗೆ ಮೂಲಭೂತ ಸೌಕರ್ಯಗಳಾದ ವೈದ್ಯರು, ಔಷಧಿ, ದಾದಿಯರು, ವಾಹನ ಸೌಕರ್ಯ, ಸಂಪರ್ಕ ಸಾಧನಗಳನ್ನು ಒದಗಿಸುವುದು. ಸಕಾಲದಲ್ಲಿ ಸಾರ್ವಜನಿಕರಿಗೆ ಈ ಎಲ್ಲಾ ಸೌಲಭ್ಯಗಳು ಸಿಗುವಂತೆ ಮಾಡುವುದು.
7. ಮಂಚಾಯಿತಿ ರಾಜ್ ಸಂಸ್ಥೆಗಳು, ಸಮುದಾಯವೇ ಆರೋಗ್ಯ ಕಾರ್ಯಕ್ರಮಗಳ ಜವಾಬ್ದಾರಿವಹಿಸುವ ಅವಕಾಶಗಳನ್ನು ಒದಗಿಸುವುದು ಹಾಗೂ ಉಸ್ತುವಾರಿಯನ್ನು ಮಾಡುವ ಅವಕಾಶ ನೀಡುವುದು.
8. ಪ್ರತಿ ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿಯು ಆ ಗ್ರಾಮದ ಆರೋಗ್ಯ ಯೋಜನೆಯನ್ನು ತಯಾರಿಸಿ ಅದನ್ನು ಜಾರಿಗೊಳಿಸುವ ಅವಕಾಶ ಒದಗಿಸಿಕೊಡುವುದು.
ಈ ಗುರಿ ಮತ್ತು ಉದ್ದೇಗಳನ್ನು ಈಡೇರಿಸಲು ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನವು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇವೆಲ್ಲವೂ ಕಾಲಮಿತಿಯೊಳಗೇ ಆಗಬೇಕಾಗಿದೆ. 2010 ರಲ್ಲಿ ಇಂತಿಷ್ಟುಕಾರ್ಯಗಳು, 2012 ರೊಳಗೆ ಇಂತಿಷ್ಟು ಸೌಲಭ್ಯಗಳು, 2015ರೊಳಗೆ ಎಲ್ಲರಿಗೂ ಆರೋಗ್ಯದ ಎಲ್ಲಾ ರೀತಿಯ ಸೌಲಭ್ಯಗಳು ಸಿಗುವಂತೆ ಮಾಡುವುದೇ ಗುರಿಯಾಗಿದೆ. ಈ ಗುರಿ ಉದ್ದೇಶಗಳನ್ನು ಈಡೇರಿಸಲು ಸಾಂಸ್ಥಿಕ ರೂಪ ಕೊಡಲಾಗಿದೆ.
ಕೊನೆಯ ಮಾರ್ಪಾಟು : 1/28/2020