অসমীয়া   বাংলা   बोड़ो   डोगरी   ગુજરાતી   ಕನ್ನಡ   كأشُر   कोंकणी   संथाली   মনিপুরি   नेपाली   ଓରିୟା   ਪੰਜਾਬੀ   संस्कृत   தமிழ்  తెలుగు   ردو

ಮಡಿಲು ಕಾರ್ಯಕ್ರಮ

ಮಡಿಲು ಕಾರ್ಯಕ್ರಮದ ಉದ್ದೇಶವೇನು?

ಉತ್ತರ : ಬಡತನ ರೇಖೆಗಿಂತ ಕಡಿಮೆ ಆದಾಯ ಇರುವ ಗರ್ಭಿಣಿ ಸ್ತ್ರೀಯರು ಸುರಕ್ಷಿತ ಹೆರಿಗೆಗಾಗಿ ಸರ್ಕಾರಿ ಆಸ್ಪತ್ರೆ ಬರಲು ಹಾಗೂ ಇದರಿಂದ ತಾಯಿ ಮತ್ತು ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶದಿಂದ ಮಡಿಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಪ್ರದೇಶದ ಎಲ್ಲಾ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮ ಮಡಿಲು ತುಂಬುವುದನ್ನು ಹಮ್ಮಿಕೊಳ್ಳಲಾಗುವುದು. ಈ ಸಂದರ್ಭಗಳಲ್ಲಿ ಗರ್ಭಿಣಿ ಸ್ತ್ರೀಗೆ ಗಂಡಾಂತರ ಹೆರಿಗೆಗಳಲ್ಲಿ ಉಂಟಾಗಬಹುದಾದ ತೊಂದರೆಗಳ ಬಗ್ಗೆ ಹಾಗೂ ಗ್ರಾಮೀಣ ಸ್ತ್ರೀಯರು ಪಡೆಯಬೇಕಾದ ಪ್ರತಿಬಂಧಕ ಲಸಿಕೆಗಳ ಬಗ್ಗೆ ಶುಚಿತ್ವದ ಬಗ್ಗೆ ಅರಿವು ಮೂಡಿಸಲಾಗುವುದು.

ಫಲಾನುಭವಿಗಳು

  • ಬಡತನ ರೇಖೆಗಿಂತ ಕೆಳಗಿರುವವರು
  • ಸರ್ಕಾರಿ ಸಂಸ್ಥೆಗಳಲ್ಲಿ ಹೆರಿಗೆ ಮಾಡಿಸಿಕೊಂಡವರು
  • ಎರಡು ಮಕ್ಕಳಿಗೆ ಮಾತ್ರ ಸೀಮಿತವಾಗಿರುವವರು

ಸೌಲಭ್ಯ

ಸುರಕ್ಷಿತ ಬಾಣಂತನಕ್ಕೆ ಹೆರಿಗೆ ನಂತರ 3 ತಿಂಗಳವರೆಗೆ ತಾಯಿ ಮಗುವಿಗೆ ಅಗತ್ಯವಿರುವ 19 ಸಾಮಗ್ರಿಗಳಿರುವ ಒಂದು ವೈದ್ಯಕೀಯ ಕಿಟ್‍ನ್ನು ‘ತವರಿನ ಉಡುಗೊರೆ’ ಎಂದು ತಾಯಿಗೆ ನೀಡಲಾಗುವುದು.

ಸೂಚನೆ

  • ಖಾಸಗಿ ಆಸ್ಪತ್ರೆಗಳಲ್ಲಿ ಹೆರಿಗೆಯಾದವರಿಗೆ ಈ ಸೌಲಭ್ಯ ಸಿಗುವುದಿಲ್ಲ.
  • ಉಪಕೇಂದ್ರ ಮತ್ತು ಆರೋಗ್ಯ ಕೇಂದ್ರದಲ್ಲಿ ಗರ್ಭಿಣಿ ಸ್ತ್ರೀಯರು ಸಾಧ್ಯವಾದಷ್ಟು ಮುಂಚಿತವಾಗಿ ನೊಂದಾಯಿಸಿಕೊಳ್ಳಬೇಕು.
  • ಬಡತನ ರೇಖೆಗಿಂತ ಕೆಳಗಿದ್ದು ಬಿ.ಪಿ.ಎಲ್. ಕಾರ್ಡ್ ಹೊಂದಿಲ್ಲದವರು ಕಂದಾಯ ಅಧಿಕಾರಿಗಳಿಂದ ಸಮಾನಾಂತರವಾದ ದೃಢೀಕರಣ ಪತ್ರವನ್ನು ಪಡೆದುಕೊಂಡು ಈ ಸೌಲಭ್ಯ ಪಡೆಯಬಹುದು.

ಮೂಲ: ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ ಹಾಗೂ ತರಬೇತಿದಾರರ ಕೈಪಿಡಿ

ಕೊನೆಯ ಮಾರ್ಪಾಟು : 7/22/2020



© C–DAC.All content appearing on the vikaspedia portal is through collaborative effort of vikaspedia and its partners.We encourage you to use and share the content in a respectful and fair manner. Please leave all source links intact and adhere to applicable copyright and intellectual property guidelines and laws.
English to Hindi Transliterate