ವೃದ್ಧಾಪ್ಯ ವೇತನದ ನಿಯಮಗಳನ್ನು ಬದಲಾಯಿಸಿ 19/11/2007ರಿಂದ ಕೇಂದ್ರ ಸರ್ಕಾರವು ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಅನ್ವಯ.
ಫಲಾನುಭವಿಗಳು 60 ವರ್ಷ ಹಾಗೂ ಮೇಲ್ಪಟ್ಟ ವಯಸ್ಸುಳ್ಳವರಾಗಿರಬೇಕು. ಅವರ ಬಡತನ ರೇಖೆಗಿಂತ(ಬಿಪಿಎಲ್) ಕೆಳಗಡೆ ಇರಬೇಕು.
ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತಿ ರಾಜ್ ಮಂತ್ರಾಲಯವು, ಬಡತನ ರೇಖೆಗಿಂತ ಕೆಳಗಿರುವವರನ್ನು ಗುರುತಿಸಲು ಕುಟುಂಬದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಬಗ್ಗೆ 13 ಅಂಶಗಳನ್ನು ನಿಗದಿಪಡಿಸಿದೆ. ಪ್ರತಿಯೊಂದು ಅಂಶಕ್ಕೆ 0-4 ಅಂಕಗಳನ್ನು ನಿಗದಿಪಡಿಸಲಾಗಿದೆ. ಅದರಂತೆ 26 ಅಂಕಗಳು ಅಥವಾ ಅದಕ್ಕಿಂತ ಕಡಿಮೆ ಅಂಕಗಳನ್ನು ಪಡೆದ ಕುಟುಂಬಗಳನ್ನು ಬಡತನದ ರೇಖೆಗಿಂತ ಕೆಳಗಿದೆ ಎಂದು ಪರಿಗಣಿಸುವುದು.
ಅಂತಹ ವ್ಯಕ್ತಿಯು ವಿಧವಾ ವೇತನ, ಅಂಗವಿಕಲ ವೇತನ, ಸಂಧ್ಯಾ ಸುರಕ್ಷಾ ಯೋಜನೆಯಡಿ ಯಾವುದೇ ತರಹದ ಪಿಂಚಣಿ ಇತ್ಯಾದಿಗಳನ್ನು ಸಾರ್ವಜನಿಕ ಅಥವಾ ಖಾಸಗಿ ಮೂಲಗಳಿಂದ ಪಡೆಯುತ್ತಿರಬಾರದು.
ವಯಸ್ಸು
ಪಿಂಚಣಿ ಮೊತ್ತ (ಪ್ರತಿ ತಿಂಗಳಿಗೆ)
ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು
ಕೇಂದ್ರ
ರಾಜ್ಯ
60-64
ರೂ.200/-
ರೂ.200/-
-
65-79
ರೂ.500/-
ರೂ.200/-
ರೂ.300/-
80 ವರ್ಷ ಮೇಲ್ಪಟ್ಟು
ರೂ.750/-
ರೂ.500/-
ರೂ.250/-
ಫಲಾನುಭವಿಗಳಿಗೆ ಗಂಡು ಮಕ್ಕಳು ಇದ್ಯಾಗ್ಯಾ ಅವರು ಫಲಾನುಭವಿಗಳನ್ನು ಪೋಷಿಸದೆ ಇದ್ದಲ್ಲಿ ಈ ಮಾಸಾಶನವನ್ನು ಪಡೆಯುಬಹುದಾಗಿದೆ.
ಜನನ ಪ್ರಮಾಣ ಪತ್ರ,ವೈದ್ಯಕೀಯ ದೃಢೀಕರಣ ಪತ್ರ ಅಥವಾ ಭಾರತ ಚುನಾವಣಾ ಆಯೋಗವು ನೀಡಿರುವ ಮತದಾರರ ಗುರುತಿನ ಚೀಟಿಯಲ್ಲಿರುವ ಜನ್ಮ ದಿನಾಂಕವು ವಯಸ್ಸಿಗೆ ಸಂಬಂಧಿಸಿದ ದಾಖಲೆಯಾಗಿರುತ್ತದೆ.